
ರಾಷ್ಟ್ರೀಯ ಹೆದ್ದಾರಿ 169 ಎ ನ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆ ತನಕ ಮತ್ತು ಪರ್ಕಳದಿಂದ ಕರಾವಳಿ ಜಂಕ್ಷನ್ ವರೆಗೆ ರಸ್ತೆ ಅಭಿವೃದ್ಧಿಗೆ ₹42.75 ಕೋಟಿ ಅನುದಾನ ಬಿಡುಗಡೆಯಾಗಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ವತಿಯಿಂದ ಈ ಅನುದಾನ ಬಿಡುಗಡೆಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೂಡಲೇ ಈ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಿದೆ ಎಂದು ತಿಳಿಸಲಾಗಿದೆ.