
ಬಾಲಿವುಡ್ ನಟ ಟೈಗರ್ ಶ್ರಾಫ್ ಹತ್ಯೆಗೆ ಯತ್ನಿಸಿದ ಮೂವರು ಶೂಟರ್‌ಗಳನ್ನು ರಾಜಸ್ಥಾನದ ಕೋಟಾ ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಲ್ಲಿ ಇಬ್ಬರು ಹರಿಯಾಣದವರು ಮತ್ತು ಒಬ್ಬರು ಬಿಹಾರದವರಾಗಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗಿದೆ.
ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ನಟಿ ರಮ್ಯಾ, ಜೈಲಿನೊಳಗಿಂದಲೇ ಗ್ಯಾಂಗ್‌ಗಳು ಕಾರ್ಯನಿರ್ವಹಿಸುತ್ತಿರುವುದು ಮತ್ತು ಯುವಕರು ಬಂದೂಕು ಹಿಡಿಯುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.