
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತದಲ್ಲಿ ಇಂಧನ ಸೌಲಭ್ಯವನ್ನು ವಿಸ್ತರಿಸಿದ ಪ್ರಮಾಣವು ಮಾನವ ಇತಿಹಾಸದ ಯಾವುದೇ ದೇಶಕ್ಕಿಂತಲೂ ಹೆಚ್ಚಿನÜದಾಗಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬನೀಸ್ ಶ್ಲಾಘಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಎದುರಾಗಿರುವ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂಧನ ಆಮದು ಮೂಲಗಳನ್ನು ವೈವಿಧ್ಯಗೊಳಿಸಿರುವ ಭಾರತವು, ಕಳೆದ 11 ವರ್ಷಗಳಲ್ಲಿ ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಸಂಖ್ಯೆಯನ್ನು 27ರಿಂದ 41ಕ್ಕೆ ಹೆಚ್ಚಿಸಿದೆ.
ಉಭಯ ನಾಯಕರು ಜುಲೈನಲ್ಲಿ ಮೆಲ್ಬೋರ್ನ್ನಲ್ಲಿ ನಡೆದ 3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಇಂಧನ, ರಕ್ಷಣೆ ಮತ್ತು ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಚರ್ಚೆ ನಡೆಸಿದ್ದರು.