
ಕರಾವಳಿ ಭಾಗದ ಮೂಲಸೌಕರ್ಯ, ಬಂದರು, ಪ್ರವಾಸೋದ್ಯಮ ಮತ್ತು ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಸಚಿವ ಸಂಪುಟ ₹32,611 ಕೋಟಿ ಮೊತ್ತದ ಯೋಜನೆಗಳಿಗೆ ಹಸಿರು ನಿಶಾನೆ ತೋರಿದೆ.
ಈ ಯೋಜನೆಗಳಲ್ಲಿ 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ, ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪನೆ ಹಾಗೂ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕಲ್ಪಿಸುವುದು ಸೇರಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಿನ 15 ತಿಂಗಳಲ್ಲಿ ರಾಜ್ಯದ ವಿವಿಧೆಡೆ 10-12 ಬಾರಿ ಸಚಿವ ಸಂಪುಟ ಸಭೆ ನಡೆಸಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಘೋಷಿಸಿದ್ದಾರೆ.