
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ ಅವರು 1.15 ಕೋಟಿ ರೂಪಾಯಿ ಮೌಲ್ಯದ ಡಿಮ್ಯಾಂಡ್ ಡ್ರಾಫ್ಟ್ ಸಲ್ಲಿಸಿದ್ದು, ಉಳಿದ 85 ಲಕ್ಷ ರೂಪಾಯಿಗಳನ್ನು ಜಮಾ ಮಾಡಲು ಸುಪ್ರೀಂ ಕೋರ್ಟ್ ಅಕ್ಟೋಬರ್ 13ರ ಮಂಗಳವಾರದವರೆಗೆ ಕಾಲಾವಕಾಶ ನೀಡಿದೆ.
ವಿಚಾರಣೆ ವೇಳೆ ನಟನ ನಡವಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಉಳಿದ ಹಣ ಪಾವತಿಯಾದ ಬಳಿಕ ದೆಹಲಿ ಹೈಕೋರ್ಟ್ ವಿಧಿಸಿರುವ ಮೂರು ತಿಂಗಳ ಜೈಲು ಶಿಕ್ಷೆ ಪ್ರಶ್ನಿಸಿದ ಮೇಲ್ಮನವಿಯನ್ನು ಪರಿಗಣಿಸುವುದಾಗಿ ತಿಳಿಸಿದೆ.
ಪಿತೃ ಪಕ್ಷದ ಕಾರಣದಿಂದ ಆಸ್ತಿ ವಹಿವಾಟು ನಡೆಸದಿರುವ ನಂಬಿಕೆಯಿಂದಾಗಿ ಜಮೀನು ಮಾರಾಟ ಪ್ರಕ್ರಿಯೆ ತಡವಾಯಿತು ಎಂದು ನಟನ ಪರ ವಕೀಲರು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದ್ದಾರೆ.