
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಾರಂಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.
ವಾಂತಿ ಮತ್ತು ಹೊಟ್ಟೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಸ್ತುತ ಎಲ್ಲರೂ ಸುರಕ್ಷಿತವಾಗಿ ವಸತಿಶಾಲೆಗೆ ಮರಳಿದ್ದಾರೆ.
ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಶಾಸಕ ಹೆಚ್.ಟಿ. ಮಂಜು ಅವರು ಅಧಿಕಾರಿಗಳಿಗೆ ಮತ್ತು ಆಡಳಿತ ಮಂಡಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.