
ಗೀತು ಮೋಹನ್‌ದಾಸ್ ನಿರ್ದೇಶನದ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದ್ದು, ಮಿಶ್ರ ಪ್ರತಿಕ್ರಿಯೆಗಳ ನಡುವೆ ನಿರ್ದೇಶಕ ಆದಿತ್ಯ ಧರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಆದಿತ್ಯ ಧರ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಯಶ್ ಅವರ ಫೋಟೋ ಹಂಚಿಕೊಂಡು ಬೆಂಬಲ ಸೂಚಿಸಿದ್ದು, ಇದು ಅಭಿಮಾನಿಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಉತ್ತರ ಭಾರತದ ಪ್ರೇಕ್ಷಕರಿಂದ ಟೀಕೆಗಳನ್ನು ಎದುರಿಸುತ್ತಿರುವ ಈ ಚಿತ್ರದ ಬಾಕ್ಸ್ ಆಫೀಸ್ ಗಳಿಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.