
ಸ್ಟಾಕ್ ಮಾರ್ಕೆಟ್ ಹೂಡಿಕೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಹೂಡಿಕೆದಾರರನ್ನು ನಿಂದಿಸಿದ್ದ ಮಹಿಳೆ ಪ್ರಿಯಾಂಕ ಕ್ಷಮೆಯಾಚಿಸಿದ್ದಾಳೆ.
ವಂಚನೆ ಬಗ್ಗೆ ಪ್ರಶ್ನಿಸಲು ಹೋದ ಹೂಡಿಕೆದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕನ್ನಡ ಭಾಷೆಯ ಬಗ್ಗೆ ಉದ್ಧಟತನ ಪ್ರದರ್ಶಿಸಿದ್ದ ಆರೋಪಿ, ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
ಪೀಣ್ಯ ಪೊಲೀಸರು ಈ ವಂಚನೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿ ಮಹಿಳೆ ಇನ್ನು ಮುಂದೆ ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಅವಾಚ್ಯ ಶಬ್ದ ಬಳಸುವುದಿಲ್ಲ ಎಂದು ಭರವಸೆ ನೀಡಿದ್ದಾಳೆ.