
ಟಿಪ್ಪು ಸುಲ್ತಾನ್ ಕಟೌಟ್ ವಿಡಿಯೋಗೆ ಪಾಕಿಸ್ತಾನ ಪರ ಹಾಡು ಬಳಸಿ ಇನ್‌ಸ್ಟಾಗ್ರಾಂನಲ್ಲಿ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಪೊಲೀಸರು ರೋಷನ್ ಎಂಬಾತನನ್ನು ಬಂಧಿಸಿದ್ದಾರೆ.
ಈ ವಿಡಿಯೋವನ್ನು ವಾಟ್ಸಾಪ್, ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ಆರೋಪದಡಿ ಒಟ್ಟು 7 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇಶವಿರೋಧಿ ಹಾಡು ಬಳಸಿ ಶಾಂತಿ ಕದಡಲು ಯತ್ನಿಸಿದ ಆರೋಪದಡಿ ಬಂಧಿತ ರೋಷನ್ ಸೇರಿದಂತೆ ಉಳಿದ ಆರು ಮಂದಿ ಅಪ್ರಾಪ್ತರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.