
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕವಾಗಿ ಸವಾಲು ಎದುರಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಪ್ಪಿಕೊಂಡಿದ್ದಾರೆ.
ಈ ಯೋಜನೆಗಳ ನಿರ್ವಹಣೆಗಾಗಿ ಸರ್ಕಾರ ಬರೋಬ್ಬರಿ 52 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದ್ದು, ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪುವಂತೆ ಪರಿಷ್ಕರಣೆ ನಡೆಸಲಾಗುತ್ತಿದೆ.
ಬೇರೆ ರಾಜ್ಯಗಳಿಂದ ಬಂದು ನೆಲೆಸಿರುವ ವಲಸಿಗರಿಗೆ ಉಚಿತ ಯೋಜನೆಗಳ ಲಾಭ ಕಡಿತಗೊಳಿಸಿ, ಕರ್ನಾಟಕದ ಮೂಲ ನಿವಾಸಿಗಳಿಗೆ ಮಾತ್ರ ಸೀಮಿತಗೊಳಿಸುವ ಕುರಿತು ಮರುಪರಿಶೀಲನೆ ನಡೆಯುತ್ತಿದೆ.