
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗವೊಂದರಲ್ಲಿ ಹೂಳು ಮತ್ತು ನೀರು ನುಗ್ಗಿದ ಪರಿಣಾಮ ಭಾರಿ ಅಪಘಾತ ಸಂಭವಿಸಿದ್ದು, 16 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಹಿಂದೂಸ್ಥಾನ್ ಕನ್ಸ್ಟ್ರಕ್ಷನ್ ಕಂಪನಿ (HCC) ಕಾಮಗಾರಿ ನಡೆಸುತ್ತಿದ್ದ ಈ ಸುರಂಗದಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿಕೊಂಡಿದ್ದು, ಉಳಿದವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ.
ತೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC) ಅಂಗಸಂಸ್ಥೆಯ ಯೋಜನಾ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ರಕ್ಷಣಾ ತಂಡಗಳು ಸ್ಥಳದಲ್ಲಿ ಬೀಡುಬಿಟ್ಟಿವೆ.