
ಸೆಪ್ಟೆಂಬರ್ 14ರ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸೆಪ್ಟೆಂಬರ್ 11ರಿಂದ 13ರವರೆಗೆ 2,400 ಹೆಚ್ಚುವರಿ ವಿಶೇಷ ಬಸ್ಗಳನ್ನು ಕೆಎಸ್ಆರ್ಟಿಸಿ ಕಾರ್ಯಾಚರಣೆ ಮಾಡಲಿದೆ.
ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಮಂದಿ ಒಂದೇ ಟಿಕೆಟ್ನಲ್ಲಿ ಬುಕ್ ಮಾಡಿದರೆ 5% ರಿಯಾಯಿತಿ ಹಾಗೂ ಹೋಗಿ ಬರುವ ಟಿಕೆಟ್ ಬುಕ್ ಮಾಡಿದರೆ 10% ರಿಯಾಯಿತಿ ನೀಡಲಾಗುತ್ತಿದೆ.
ಮೆಜೆಸ್ಟಿಕ್, ಮೈಸೂರು ರಸ್ತೆ ಮತ್ತು ಶಾಂತಿನಗರ ಬಸ್ ನಿಲ್ದಾಣಗಳಿಂದ ರಾಜ್ಯದ ವಿವಿಧ ಭಾಗಗಳು ಹಾಗೂ ನೆರೆಯ ತಮಿಳುನಾಡು, ಕೇರಳ ಮತ್ತು ತೆಲಂಗಾಣಕ್ಕೆ ವಿಶೇಷ ಬಸ್ ಸೇವೆ ಲಭ್ಯವಿದೆ.