
ಪೂರ್ವಮುದ್ರಿತ ಫಾರಂ-7 ಬಳಸಿ ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ ಸಿಎಂ ಡಿ.ಕೆ. ಶಿವಕುಮಾರ್ ಚುನಾವಣಾ ಆಯೋಗದ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಮತ್ತು ಜೆಡಿಎಸ್‌ನವರು ಕ್ರಿಮಿನಲ್ ಸಂಚು ರೂಪಿಸಿ ರಾಜ್ಯದ 50 ಲಕ್ಷ ಮತದಾರರನ್ನು ಡಿಲೀಟ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಎಂ ಗಂಭೀರ ಆರೋಪ ಮಾಡಿದ್ದಾರೆ.
ಈ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕೆಂದು ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.