
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಿಮಿನಲ್ ಕ್ರಮ ಜರುಗಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ನಡೆಸಿದ ಗಂಭೀರ ಅಪರಾಧಿಗಳಿಗೆ ವಿನಾಯಿತಿ ಇರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸ್ಪಷ್ಟಪಡಿಸಿದ್ದಾರೆ.
ಪೊಲೀಸರ ಲಾಠಿಚಾರ್ಜ್ ಕುರಿತು ತನಿಖೆಗೆ ಸಮಿತಿ ರಚಿಸುವ ಬಗ್ಗೆ ಪರಿಶೀಲಿಸುತ್ತಿರುವ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 18ಕ್ಕೆ ನಿಗದಿಪಡಿಸಿದೆ.