ನ್ಯಾಷನಲ್ ಜುಡಿಷಿಯಲ್ ಡೇಟಾ ಗ್ರಿಟ್ ದತ್ತಾಂಶದ ಪ್ರಕಾರ, ದೇಶದ ವಿವಿಧ ನ್ಯಾಯಾಲಯಗಳಲ್ಲಿ 20 ವರ್ಷಗಳಿಗೂ ಹೆಚ್ಚು ಕಾಲದಿಂದ 11,73,509 ಪ್ರಕರಣಗಳು ಬಾಕಿ ಉಳಿದಿವೆ.
ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ 1.61 ಲಕ್ಷ ಪ್ರಕರಣಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಕರ್ನಾಟಕ ಹೈಕೋರ್ಟ್ನಲ್ಲಿ ಕಳೆದ ಎರಡು ದಶಕಗಳಿಂದ 569 ಪ್ರಕರಣಗಳು ಬಾಕಿ ಇವೆ.
ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ರಾಜ್ಯಸಭೆಯಲ್ಲಿ ನೀಡಿದ ಮಾಹಿತಿಯಂತೆ, ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಮಾತ್ರ 7,21,357 ಪ್ರಕರಣಗಳು ದೀರ್ಘಕಾಲದಿಂದ ಬಾಕಿ ಇವೆ.