
ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಆಗಸ್ಟ್ 15ರಂದು ಮೂವರು ತಮಿಳರು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಕೊಯಮತ್ತೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಲಾಗಿದೆ.
ನಾಮ್ ತಮಿಳರ್ ಕಚ್ಚಿ (NTK) ಕಾರ್ಯಕರ್ತರು ವಿಲಾಂಕುರಿಚಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿ, ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೊಯಮತ್ತೂರು ಪೊಲೀಸರು ಪ್ರಕರಣದ ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.