
ಛತ್ತೀಸ್‌ಗಢದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಉಡುಪಿ ಮತ್ತು ಚಿಕ್ಕಮಗಳೂರು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಹಿಂಗಾರು ಮಳೆ ಈ ಬಾರಿ ವಾಡಿಕೆಯಂತೆ ಬರುವ ನಿರೀಕ್ಷೆಯಿದೆ ಎಂದು ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಪೆಸಿಫಿಕ್ ಸಾಗರದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಗಾರು ಮಳೆ ಕುಂಠಿತಗೊಂಡಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.