
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಹೊಟ್ಟೆ ನೋವಿನ ಕಾರಣ ನರ್ಸಿಂಗ್ ಹೋಂಗೆ ದಾಖಲಾಗಿದ್ದ 16 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ನಂತರ ನವಜಾತ ಶಿಶುವನ್ನು ಶೌಚಾಲಯದ ಕಿಟಕಿಯಿಂದ ಹೊರಗೆ ಎಸೆದ ಪರಿಣಾಮ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಆರಂಭಿಸಿದ್ದಾರೆ.