
ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಿಧಿಸಲಾದ ಸಂಚಾರ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ನೊಣವನ್ನು ಕೊಲ್ಲಲು ಸುತ್ತಿಗೆಯ ಅಗತ್ಯವಿಲ್ಲ ಎಂದು ತಿಳಿಸಿದ ನ್ಯಾಯಪೀಠ, ಮೆಟ್ರೋ ನಿಲ್ದಾಣಗಳ ಬಂದ್ ಮತ್ತು ರೈಲುಗಳ ರದ್ದತಿಯನ್ನು ಮರುಪರಿಶೀಲಿಸುವಂತೆ ಸೂಚಿಸಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸುವ ಜವಾಬ್ದಾರಿ ಪೊಲೀಸರದ್ದಾಗಿದ್ದು, ಅದಕ್ಕಾಗಿ ಲಕ್ಷಾಂತರ ಸಾಮಾನ್ಯ ಪ್ರಯಾಣಿಕರಿಗೆ ತೊಂದರೆ ನೀಡುವುದು ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.