
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಅನಂತಶಯನಗುಡಿ ಗ್ರಾಮದಲ್ಲಿ ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.
ಮೂರ್ತಿಯಲ್ಲಿದ್ದ ಬಿದಿರುಗಳು ವಿದ್ಯುತ್ ಕಂಬದ ತಂತಿಗೆ ತಗುಲಿದ ಕಾರಣ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಗಣಪತಿ ಮೂರ್ತಿ ಸಮೇತ ಕಾಲುವೆಗೆ ಉರುಳಿಬಿದ್ದಿದೆ.
ಈ ದುರ್ಘಟನೆಯಲ್ಲಿ ಹುಲುಗಪ್ಪ ಮತ್ತು ದೀಪಕ್ ಎಂಬುವವರಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗಳಾಗಿದ್ದು, ಅವರನ್ನು ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.