
ಬಿಹಾರ ಕ್ರಿಕೆಟ್ ಮಂಡಳಿಯು ಮುಂಬರುವ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಗೆ 15 ವರ್ಷದ ವೈಭವ್ ಸೂರ್ಯವಂಶಿಗೆ ನಾಯಕತ್ವ ನೀಡಿದೆ.
ನವೆಂಬರ್ 14ರಿಂದ ಡಿಸೆಂಬರ್ 6ರವರೆಗೆ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 38 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ.
ಇಷ್ಟು ಚಿಕ್ಕ ವಯಸ್ಸಿನಲ್ಲಿ ಇಂತಹ ದೊಡ್ಡ ಜವಾಬ್ದಾರಿ ನೀಡುವುದು ಆತುರದ ನಿರ್ಧಾರ ಎಂದು ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದರು.