
ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಲು ಸಂಸತ್ತಿನ ಉಭಯ ಸದನಗಳಲ್ಲಿ ಕಠಿಣ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಾರ್ಯಪಡೆ ರಚನೆ ಮತ್ತು ತ್ವರಿತ ನ್ಯಾಯಾಲಯಗಳ ಸ್ಥಾಪನೆ ಸೇರಿದಂತೆ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆ (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆಯು ಪರೀಕ್ಷಾ ವ್ಯವಸ್ಥೆಯನ್ನು ವಿಶ್ವಾಸಾರ್ಹವಾಗಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಮೋದಿ ಇನ್ಸ್ಟಾಗ್ರಾಮ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.