
ರಾಜ್ಯದಲ್ಲಿ ಇಂಧನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೆಂಗಳೂರು ನಗರದಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 111.68 ರೂಪಾಯಿ ಹಾಗೂ ಡೀಸೆಲ್ ಬೆಲೆ 99.56 ರೂಪಾಯಿ ಇದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ದರವು ಸುಮಾರು 110 ರಿಂದ 121 ರೂಪಾಯಿ ವರೆಗೆ ಹಾಗೂ ಡೀಸೆಲ್ ದರವು 98 ರಿಂದ 100 ರೂಪಾಯಿ ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ.
ರಾಯಚೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ರಾಜ್ಯದಲ್ಲೇ ಅತ್ಯಧಿಕ ಮಟ್ಟದಲ್ಲಿದ್ದು, ಗ್ರಾಹಕರಿಗೆ ಇಂಧನ ವೆಚ್ಚದ ಹೊರೆ ಮುಂದುವರಿದಿದೆ.