
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಧ್ಯಕ್ಷರಿಲ್ಲದ ಅವಧಿಯನ್ನು ಬಳಸಿಕೊಂಡು ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ 8.43 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ.
2022-23ರ ಅವಧಿಯಲ್ಲಿ ನಡೆದ ಈ ಹಗರಣದಲ್ಲಿ ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್ ಪ್ರಮುಖ ಆರೋಪಿಯಾಗಿದ್ದು, ಈತ ಸದ್ಯ ಪರಾರಿಯಾಗಿದ್ದಾನೆ.
ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ ಅವರು ಈ ಅಕ್ರಮದ ಹಿಂದೆ ದೊಡ್ಡ ಜಾಲವೇ ಇದೆ ಎಂದು ಆರೋಪಿಸಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.