
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ 'ಕಾಕ್ರೋಚ್ ಜನತಾ ಪಾರ್ಟಿ' ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಯತ್ನಿಸಿದ 7,000ಕ್ಕೂ ಅಧಿಕ ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾತ್ರಿ ವೇಳೆ ಸಾಮಾನ್ಯ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡಲಾಗಿದ್ದು, ಸಿಜೆಪಿ ನಾಯಕರನ್ನು ಮಾತ್ರ ರಹಸ್ಯ ಸ್ಥಳದಲ್ಲಿ ಇರಿಸಲಾಗಿದೆ.
ನಾಳೆ ಕೂಡ ಪ್ರತಿಭಟನೆ ನಡೆಸುವುದಾಗಿ ಸಿಜೆಪಿ ಘೋಷಿಸಿರುವುದರಿಂದ ದೆಹಲಿಯಲ್ಲಿ ಭಾರಿ ಭದ್ರತಾ ವ್ಯವಸ್ಥೆ ಮುಂದುವರಿಯಲಿದೆ.