
ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ಮೊದಲ ದಿನವೇ ಚಿತ್ರಮಂದಿರಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ.
ಬೆಂಗಳೂರು ಸೇರಿದಂತೆ ತುಮಕೂರಿನ ಗಾಯತ್ರಿ ಮತ್ತು ಮಾರುತಿ ಚಿತ್ರಮಂದಿರಗಳಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಯಶ್ ಫೋಟೋಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.
ಬೆಳಗ್ಗೆ 9 ಗಂಟೆಯ ವೇಳೆಗೆ ಚಿತ್ರಮಂದಿರಗಳ ಮುಂದೆ ಅಭಿಮಾನಿಗಳ ದಂಡು ಸೇರಿದ್ದು, ರಾಜ್ಯದಾದ್ಯಂತ ಚಿತ್ರಕ್ಕೆ ಭರ್ಜರಿ ಸ್ವಾಗತ ದೊರೆತಿದೆ.