
ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಸೆಪ್ಟೆಂಬರ್ 5ರವರೆಗೆ ಪೂರ್ವ ಮತ್ತು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಒಡಿಶಾ, ಛತ್ತೀಸ್ಗಢ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಮಳೆ ಹೆಚ್ಚಾಗಲಿದ್ದು, ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿಯೂ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಮುಂದಿನ 3 ದಿನ ಹವಾಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲದಿದ್ದರೂ, ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ಮತ್ತು ಹಗುರ ಮಳೆಯಾಗುವ ಮುನ್ಸೂಚನೆ ಇದೆ.