
ಮುಂಗಾರು ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೆಆರ್ಎಸ್ ಜಲಾಶಯದಲ್ಲಿ 108.80 ಅಡಿ ನೀರಿದ್ದು, ತುಂಗಭದ್ರಾ ಜಲಾಶಯದಲ್ಲಿ 1630.20 ಅಡಿ ಮತ್ತು ಆಲಮಟ್ಟಿ ಜಲಾಶಯದಲ್ಲಿ 519.44 ಮೀಟರ್ ನೀರಿನ ಮಟ್ಟ ದಾಖಲಾಗಿದೆ.
ಲಿಂಗನಮಕ್ಕಿ ಜಲಾಶಯದಲ್ಲಿ 1796 ಅಡಿ ನೀರಿದ್ದು, ಕಳೆದ ವರ್ಷದ ಇದೇ ದಿನದ ಮಟ್ಟಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದ ಜಲಮಟ್ಟ ಕಡಿಮೆಯಾಗಿದೆ ಎಂದು ವರದಿಯಾಗಿದೆ.