
ತುಮಕೂರು ಜಿಲ್ಲಾಸ್ಪತ್ರೆಯ 75 ವರ್ಷಗಳ ಹಳೆಯ ಕಟ್ಟಡದ ಬದಲಿಗೆ 131 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
ಜಿಲ್ಲಾ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿ ನಿಧಿಯ (DMF) ನೆರವಿನಿಂದ ನಿರ್ಮಾಣವಾಗುತ್ತಿರುವ ಈ ಕಟ್ಟಡದ ಕಾಮಗಾರಿಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸಲು ಗುರಿ ನಿಗದಿಪಡಿಸಲಾಗಿದೆ.
ಆಸ್ಪತ್ರೆಯಲ್ಲಿ ಅತ್ಯಾಧುನಿಕ ಶೌಚಾಲಯ ಮತ್ತು ಸುಸಜ್ಜಿತ ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ರೋಗಿಗಳಿಗೆ ಚಿಕಿತ್ಸೆಯಲ್ಲಿ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.