
ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಸಿಐಡಿ ತನಿಖೆ ವೇಳೆ 5 ಕೋಟಿ ರೂಪಾಯಿ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದ್ದು, 85 ಲಕ್ಷ ಹಣ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ.
ಪ್ರಕರಣದಲ್ಲಿ ಇದುವರೆಗೆ 273 ಮಂದಿಯನ್ನು ವಿಚಾರಣೆ ನಡೆಸಲಾಗಿದ್ದು, 15 ಅಭ್ಯರ್ಥಿಗಳು ಸೇರಿದಂತೆ ಕೆಲ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಅವರ ಜೊತೆಗಿದ್ದ ಯುವತಿಯ ಬಳಿಯಿದ್ದ 23 ಲಕ್ಷದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ನಗದು ಮೂಲಕವೇ ಹೆಚ್ಚಿನ ವ್ಯವಹಾರ ನಡೆದಿರುವುದು ತನಿಖೆಯಿಂದ ತಿಳಿದುಬಂದಿದ್ದು, ಪ್ರಕರಣ ಸಂಬಂಧ ಸಿಐಡಿಯು ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆಯಿದೆ.