
ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಹೆಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಮುತ್ತಿಗೆ ಹಾಕಿ, ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಜಲಾಶಯದ ನೀರಿನ ಮಟ್ಟ 84 ಅಡಿಯಿಂದ 72 ಅಡಿಗೆ ಕುಸಿದಿದ್ದು, ಒಳಹರಿವು 4,500 ಕ್ಯೂಸೆಕ್ಸ್ಗೆ ಇಳಿದಿದ್ದರೂ ಪ್ರತಿನಿತ್ಯ 8,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ.
ಪ್ರತಿಭಟನಾಕಾರರು ತಹಶೀಲ್ದಾರ್ ಶ್ರೀನಿವಾಸ್ ಮತ್ತು ಎಂಜಿನಿಯರ್ಗಳನ್ನು ತರಾಟೆಗೆ ತೆಗೆದುಕೊಂಡು, ರಾಜ್ಯ ಸರ್ಕಾರ ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.