
ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 1 ರಂದು ಮೈಸೂರಿಗೆ ಭೇಟಿ ನೀಡಲಿದ್ದು, ಶ್ರೀ ರಾಮಕೃಷ್ಣ ಆಶ್ರಮದಲ್ಲಿ 45 ಕೋಟಿ ರೂ. ವೆಚ್ಚದ ವಿವೇಕ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 2:55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ, ಸಂಜೆ 5:55ಕ್ಕೆ ದೆಹಲಿಗೆ ವಾಪಸಾಗಲಿದ್ದು, ನಗರದ 12 ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಶ್ವಾನ ದಳದ ತಪಾಸಣೆ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.