
ಬ್ರಿಕ್ಸ್ ಶೃಂಗಸಭೆ ಆರಂಭವಾಗುವ ಮುನ್ನ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಯುತ್ತಿದೆ.
ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು 2030ರ ವೇಳೆಗೆ 100 ಬಿಲಿಯನ್ ಡಾಲರ್ಗೆ (ಸುಮಾರು ₹9.6 ಲಕ್ಷ ಕೋಟಿ) ಹೆಚ್ಚಿಸುವ ಗುರಿ ಹಾಗೂ ಕೈಗಾರಿಕಾ ಸಹಕಾರ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
ನಾಗರಿಕ ಪರಮಾಣು ವಲಯದ ಸಹಕಾರ, ಕುಶಲ ಕಾರ್ಮಿಕರ ಸಂಚಾರ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ಸಹಭಾಗಿತ್ವ ವೃದ್ಧಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.