
2007ರ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತೀಯ ಆಲ್ರೌಂಡರ್ ಯುವರಾಜ್ ಸಿಂಗ್ ಸ್ಟುವರ್ಟ್ ಬ್ರಾಡ್ ಬೌಲಿಂಗ್ನಲ್ಲಿ ಒಂದೇ ಓವರ್ನಲ್ಲಿ 6 ಸಿಕ್ಸರ್ಗಳನ್ನು ಸಿಡಿಸಿ ಇತಿಹಾಸ ಸೃಷ್ಟಿಸಿದ್ದರು.
ಪಂದ್ಯದ ವೇಳೆ ಆಂಡ್ರ್ಯೂ ಫ್ಲಿಂಟಾಫ್ ಜೊತೆ ನಡೆದ ಮಾತಿನ ಚಕಮಕಿಯಿಂದ ಕೆರಳಿದ ಯುವಿ, ಕೇವಲ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಟಿ20 ಕ್ರಿಕೆಟ್ನಲ್ಲಿ ಇಂದಿಗೂ ಅತಿ ವೇಗದ ಅರ್ಧಶತಕದ ದಾಖಲೆ ಹೊಂದಿದ್ದಾರೆ.
ಈ ಸ್ಫೋಟಕ ಇನ್ನಿಂಗ್ಸ್ ಧೋನಿ ನೇತೃತ್ವದ ಟೀಮ್ ಇಂಡಿಯಾ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲಲು ಪ್ರಮುಖ ಪಾತ್ರ ವಹಿಸಿತ್ತು.