
ನೆದರ್ಲ್ಯಾಂಡ್ಸ್‌ನ ಆಮ್ಸ್ಟಲ್ವೀನ್‌ನಲ್ಲಿ ನಡೆಯುತ್ತಿರುವ ಪುರುಷರ ಎಫ್‌ಐಎಚ್ ಹಾಕಿ ವಿಶ್ವಕಪ್ 2026 ಟೂರ್ನಿಯಲ್ಲಿ ಇಂದು ಸಂಜೆ 6:30ಕ್ಕೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಪೂಲ್ 'ಡಿ' ಅಂಕಪಟ್ಟಿಯಲ್ಲಿ ಭಾರತ 3 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ 1 ಅಂಕ ಪಡೆದಿದ್ದು, ಮುಂದಿನ ಹಂತಕ್ಕೇರಲು ಎರಡೂ ತಂಡಗಳಿಗೆ ಈ ಪಂದ್ಯ ನಿರ್ಣಾಯಕವಾಗಿದೆ.
ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಡಿಡಿ ಸ್ಪೋರ್ಟ್ಸ್ ಮತ್ತು ಜಿಯೋಹಾಟ್‌ಸ್ಟಾರ್ ಆ್ಯಪ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.