Entertainment
ನಟ ಧನ್ವೀರ್ ವಿರುದ್ಧ ಕೋರ್ಟ್‌ನಲ್ಲಿ ಮಾನನಷ್ಟ ದೂರು ದಾಖಲಿಸಿದ ವಿಜಯಲಕ್ಷ್ಮಿ

ನಟ ಧನ್ವೀರ್ ವಿರುದ್ಧ ಕೋರ್ಟ್‌ನಲ್ಲಿ ಮಾನನಷ್ಟ ದೂರು ದಾಖಲಿಸಿದ ವಿಜಯಲಕ್ಷ್ಮಿ

tv9kannada1h
THE BRIEF
1

ಸ್ಯಾಂಡಲ್‌ವುಡ್ ನಟ ಧನ್ವೀರ್ ಹಾಗೂ ವಿಜಯಲಕ್ಷ್ಮಿ ನಡುವಿನ ವಿವಾದ ಮುಂದುವರಿದಿದ್ದು, ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಅವರು ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಮಾನನಷ್ಟ ದೂರು ದಾಖಲಿಸಿದ್ದಾರೆ.

2

ತಮ್ಮ ವಿರುದ್ಧ ಮಾನನಷ್ಟವಾಗುವಂತಹ ಹೇಳಿಕೆಗಳನ್ನು ನೀಡಿ ಅವುಗಳನ್ನು ಮಾಧ್ಯಮ ಹಾಗೂ ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ ಎಂದು ವಿಜಯಲಕ್ಷ್ಮಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

3

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 356(2) ರ ಅಡಿಯಲ್ಲಿ ದೂರು ದಾಖಲಿಸಿರುವ ಅವರು, ಎಲೆಕ್ಟ್ರಾನಿಕ್ ದಾಖಲೆಗಳು ಮತ್ತು ಆಡಿಯೋ-ವೀಡಿಯೋ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ತಿಳಿಸಿ ಸಮನ್ಸ್ ಜಾರಿಗೊಳಿಸುವಂತೆ ಕೋರಿದ್ದಾರೆ.