
ಸ್ಯಾಂಡಲ್ವುಡ್ ನಟ ಧನ್ವೀರ್ ಹಾಗೂ ವಿಜಯಲಕ್ಷ್ಮಿ ನಡುವಿನ ವಿವಾದ ಮುಂದುವರಿದಿದ್ದು, ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಅವರು ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಮಾನನಷ್ಟ ದೂರು ದಾಖಲಿಸಿದ್ದಾರೆ.
ತಮ್ಮ ವಿರುದ್ಧ ಮಾನನಷ್ಟವಾಗುವಂತಹ ಹೇಳಿಕೆಗಳನ್ನು ನೀಡಿ ಅವುಗಳನ್ನು ಮಾಧ್ಯಮ ಹಾಗೂ ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ ಎಂದು ವಿಜಯಲಕ್ಷ್ಮಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 356(2) ರ ಅಡಿಯಲ್ಲಿ ದೂರು ದಾಖಲಿಸಿರುವ ಅವರು, ಎಲೆಕ್ಟ್ರಾನಿಕ್ ದಾಖಲೆಗಳು ಮತ್ತು ಆಡಿಯೋ-ವೀಡಿಯೋ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ತಿಳಿಸಿ ಸಮನ್ಸ್ ಜಾರಿಗೊಳಿಸುವಂತೆ ಕೋರಿದ್ದಾರೆ.