
ಬೆಂಗಳೂರಿನಲ್ಲಿ ನಡೆದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರು ಆರ್ಎಸ್ಎಸ್ ನೋಂದಣಿ ಕುರಿತ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಆರ್ಎಸ್ಎಸ್ ನೋಂದಣಿಯಾಗಿಲ್ಲ ಮತ್ತು ಮುಂದೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನೋಂದಣಿಯೇ ಮಾನದಂಡವಲ್ಲ ಎಂದು ವಾದಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟದಲ್ಲಿ 35 ಲಕ್ಷಕ್ಕೂ ಹೆಚ್ಚು ಹಿಂದೂಗಳ ಬಲಿದಾನವಿದೆ ಎಂದು ಪ್ರತಿಪಾದಿಸಿದ ಅವರು, ಸಂಘವು ಸಮಾಜದ ರಕ್ಷಣೆ ಮತ್ತು ಸೇವೆಗೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.