
ಬೆಂಗಳೂರಿನ ಬಸವನಗುಡಿ ಗಲಾಟೆ ಪ್ರಕರಣದಲ್ಲಿ ಜೈಲು ಸೇರಿರುವ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.
ಬೆಂಬಲಿಗರ ಈ ಸುಳ್ಳು ಸುದ್ದಿಯ ಬಗ್ಗೆ ಅನುಮಾನಗೊಂಡು ಪೊಲೀಸರು ಜೈಲಾಧಿಕಾರಿಗಳನ್ನು ಸಂಪರ್ಕಿಸಿದಾಗ, ಆತ ಯಾವುದೇ ಉಪವಾಸವಿಲ್ಲದೆ ನಿಯಮಿತವಾಗಿ ಊಟ ಮಾಡುತ್ತಿರುವುದು ಸಿಸಿಟಿವಿಯಲ್ಲಿ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ 'ಸಂವಾದ' ಸೇರಿದಂತೆ 14 ಇನ್ಸ್ಟಾಗ್ರಾಮ್ ಹಾಗೂ 9 ಫೇಸ್ಬುಕ್ ಖಾತೆಗಳ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಶಾಂತಿಭಂಗದ ಬಾಂಡ್ ಉಲ್ಲಂಘನೆಗಾಗಿ ಮತ್ತೊಂದು ಕೇಸ್ ದಾಖಲಿಸಲು ಸಿದ್ಧತೆ ನಡೆಸಲಾಗಿದೆ.