
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ ಟ್ರಾನ್ಸ್ಭಾರತ್ ಏವಿಯೇಷನ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿದ್ದು, ಒಟ್ಟು 6 ಮಂದಿ ಪ್ರಯಾಣಿಕರಿದ್ದರು.
ಬದರಿನಾಥ ಧಾಮದಿಂದ ವಾಪಸ್ ಬರುತ್ತಿದ್ದ ವೇಳೆ ಚಾಯ್ ಮತ್ತು ಥಾಯಾಂಗ್ ಗ್ರಾಮಗಳ ಸಮೀಪ ಪರ್ವತ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.
ಕೆಟ್ಟ ಹವಾಮಾನ ಮತ್ತು ಕಡಿಮೆ ಗೋಚರತೆ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ನಡೆಸಿವೆ.