
ಬೆಂಗಳೂರಿನಲ್ಲಿ ನಡೆದ ಹಿಂದುಳಿದ ಜಾತಿಗಳ ಒಕ್ಕೂಟದ ಸಮಾವೇಶದಲ್ಲಿ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ವೇದಿಕೆಯಲ್ಲೇ ಎರಡು ಬಾರಿ ಘೋಷಣೆ ಕೂಗಿದ್ದಾರೆ.
ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಅವರು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಚುನಾವಣಾ ವ್ಯವಸ್ಥೆ ಅತ್ಯಂತ ದುಬಾರಿಯಾಗಿರುವುದರಿಂದ ತಾವು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ ಸಿದ್ದರಾಮಯ್ಯ, ಜಾತಿ ವ್ಯವಸ್ಥೆ ತೊಲಗುವವರೆಗೆ ಹಿಂದುಳಿದ ವರ್ಗಗಳ ಪರ ಹೋರಾಟ ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ.