
ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದ ಪ್ರೌಢಶಾಲೆಯಲ್ಲಿ ಬುಧವಾರ ಬಿಸಿಯೂಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ, ಹೊಟ್ಟೆ ನೋವು ಮತ್ತು ಅಲರ್ಜಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ.
ಅಂದು ಶಾಲೆಗೆ ಹಾಜರಿದ್ದ 39 ವಿದ್ಯಾರ್ಥಿಗಳು ಅನ್ನ ಮತ್ತು ಬದನೆಕಾಯಿ ಬಜ್ಜಿಯನ್ನು ಸೇವಿಸಿದ್ದು, ಇಬ್ಬರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಆಹಾರ ಮತ್ತು ನೀರಿನ ಸ್ಯಾಂಪಲ್‌ಗಳನ್ನು ಸಂಗ್ರಹಿಸಿದ್ದು, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.