
ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಭಾರತ ತಂಡವು ಫೈನಲ್ ಪ್ರವೇಶಿಸಲು ಉಳಿದಿರುವ 8 ಪಂದ್ಯಗಳಲ್ಲಿ ಕನಿಷ್ಠ 7 ಪಂದ್ಯಗಳನ್ನು ಗೆಲ್ಲಲೇಬೇಕಿದೆ.
ಭಾರತವು ಶ್ರೀಲಂಕಾ ವಿರುದ್ಧದ ಉಳಿದ ಒಂದು ಪಂದ್ಯ, ನ್ಯೂಝಿಲೆಂಡ್ ವಿರುದ್ಧದ 2 ಪಂದ್ಯಗಳು ಮತ್ತು ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಈ ಗುರಿಯನ್ನು ಸಾಧಿಸಬೇಕಿದೆ.
ಮುಂದಿನ 8 ಪಂದ್ಯಗಳಲ್ಲಿ 7 ಜಯ ಸಾಧಿಸಿದರೆ ಭಾರತವು 68.52% ಅಂಕಗಳೊಂದಿಗೆ ನೇರವಾಗಿ ಫೈನಲ್ ತಲುಪಲಿದ್ದು, ಒಂದಕ್ಕಿಂತ ಹೆಚ್ಚು ಸೋಲು ಎದುರಾದರೆ ಇತರ ತಂಡಗಳ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ.