
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) ತಮಿಳುನಾಡಿಗೆ ಪ್ರತಿದಿನ 9000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೋಮವಾರ ಆದೇಶಿಸಿದೆ.
ದೆಹಲಿಯಲ್ಲಿ ನಡೆದ ಸಭೆಯಲ್ಲಿ ತಮಿಳುನಾಡಿನ 28 ಟಿಎಂಸಿ ನೀರಿನ ಬೇಡಿಕೆಯನ್ನು ಪ್ರಾಧಿಕಾರ ತಿರಸ್ಕರಿಸಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಸುಪ್ರೀಂ ಕೋರ್ಟ್ ನಿಗದಿಪಡಿಸಿದೆ.
ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ನೇತೃತ್ವದ ರಾಜ್ಯ ತಂಡವು ಸಭೆಯಲ್ಲಿ ಭಾಗವಹಿಸಿದ್ದು, ಕಾನೂನು ಹೋರಾಟದ ಮುಂದಿನ ನಿರ್ಧಾರವನ್ನು ಕಾನೂನು ತಂಡದೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದೆ.