
ಆರ್‌ಎಸ್‌ಎಸ್ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸುತ್ತದೆ ಎಂದು ಆರೋಪಿಸಿರುವ ಅಮೆರಿಕದ ಯುಎಸ್‌ಸಿಐಆರ್‌ಎಫ್, ಆ ಸಂಘಟನೆಯ ಮೇಲೆ ನಿರ್ಬಂಧ ಹೇರಬೇಕೆಂದು ಅಮೆರಿಕ ಸರ್ಕಾರವನ್ನು ಒತ್ತಾಯಿಸಿದೆ.
ಆಗಸ್ಟ್ 29ರಂದು ಅಮೆರಿಕದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ.
ಕೆನಡಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಆರ್‌ಎಸ್‌ಎಸ್ ಸದಸ್ಯರ ಪಾತ್ರವಿದೆ ಎಂದು ಆರೋಪಿಸಿ, ಆ ಸಂಘಟನೆಯನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸುವಂತೆ ಕೆನಡಾದ ಸಂಸದರು ಆಗ್ರಹಿಸಿದ್ದಾರೆ.