
ಮಂಡ್ಯ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿಗಳಿಗೆ ವಿತರಿಸಲಾಗುವ ಹಾಲಿನ ಪುಡಿಯಲ್ಲಿ ಕಲಬೆರಕೆ ಮಾಡಿರುವ ಗಂಭೀರ ಆರೋಪದ ಮೇಲೆ 6 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕ್ಷೀರಭಾಗ್ಯ ಯೋಜನೆಯಡಿ 2016-17ನೇ ಸಾಲಿನಿಂದ ಪ್ರಸಕ್ತ ಸಾಲಿನವರೆಗೆ ಈ ಅವ್ಯವಹಾರ ನಡೆದಿದ್ದು, ಮನ್ಮುಲ್ ವ್ಯವಸ್ಥಾಪಕ ನಿರ್ದೇಶಕರು ಲೋಕಾಯುಕ್ತಕ್ಕೆ ಮಾಹಿತಿ ನೀಡಿದ್ದರು.
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಆದೇಶದ ಮೇರೆಗೆ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿಗಳಿಗೆ ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.