
ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿಗಳನ್ನು ಪತ್ತೆಹಚ್ಚಲು ಮತ್ತು ಹಸ್ತಾಂತರಿಸಲು ಎಲ್ಲ ದೇಶಗಳು ಸಹಕರಿಸಬೇಕು ಎಂದು ಭಾರತ ಮನವಿ ಮಾಡಿದೆ.
ಹೈದರಾಬಾದ್‌ನಲ್ಲಿ ನಡೆದ ಬ್ರಿಕ್ಸ್ ಭ್ರಷ್ಟಾಚಾರ ವಿರೋಧಿ ಕಾರ್ಯಕಾರಿ ಗುಂಪಿನ ಸಭೆಯಲ್ಲಿ ಮಾತನಾಡಿದ ರಚನಾ ಶಾ, ಭ್ರಷ್ಟಾಚಾರವು ಸುಸ್ಥಿರ ಅಭಿವೃದ್ಧಿಗೆ ಅಡ್ಡಿಯಾಗಿದೆ ಎಂದು ತಿಳಿಸಿದ್ದಾರೆ.
ಅಪರಾಧದಿಂದ ಲಾಭ ಗಳಿಸುವ ವ್ಯಕ್ತಿಗಳಿಗೆ ಯಾವುದೇ ದೇಶವು ಸುರಕ್ಷಿತ ತಾಣವಾಗದಂತೆ ನೋಡಿಕೊಳ್ಳಲು ಅಂತರರಾಷ್ಟ್ರೀಯ ಸಹಕಾರ ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.