
ಪ್ರಯಾಣಿಕರ ಸುರಕ್ಷತೆ ಮತ್ತು ಅಹಿತಕರ ಘಟನೆಗಳ ತಡೆಗಾಗಿ ರಾತ್ರಿ 11ರಿಂದ ಬೆಳಗ್ಗೆ 5 ಗಂಟೆಯವರೆಗೆ ರೈಲು ಬೋಗಿಗಳಲ್ಲಿ ಮೊಬೈಲ್ ಚಾರ್ಜಿಂಗ್ ಪಾಯಿಂಟ್ಗಳನ್ನು ಸ್ಥಗಿತಗೊಳಿಸುವಂತೆ ರೈಲ್ವೆ ಮಂಡಳಿ ಎಲ್ಲಾ ವಲಯಗಳಿಗೆ ನಿರ್ದೇಶನ ನೀಡಿದೆ.
ಮುಂಬೈ ಸ್ಥಳೀಯ ರೈಲಿನಲ್ಲಿ ಪವರ್ ಬ್ಯಾಂಕ್ ಸ್ಫೋಟಗೊಂಡು ಬೋಗಿಯಲ್ಲಿ ದಟ್ಟ ಹೊಗೆ ಆವರಿಸಿದ ಘಟನೆಯ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ನಿರ್ಬಂಧಿತ ಅವಧಿಯಲ್ಲಿ ಚಾರ್ಜಿಂಗ್ ಪಾಯಿಂಟ್ಗಳು ಆಫ್ ಆಗಿರುವುದನ್ನು ಖಚಿತಪಡಿಸಿಕೊಳ್ಳಲು ಅನಿರೀಕ್ಷಿತ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.