
ವಿಂಡ್‌ಹೋಕ್‌ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 5 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ನಮೀಬಿಯಾ 3-2 ಅಂತರದಿಂದ ಸರಣಿ ಗೆದ್ದುಕೊಂಡಿದೆ.
ಕಳೆದ 23 ವರ್ಷಗಳಿಂದ ಏಕದಿನ ಕ್ರಿಕೆಟ್ ಆಡುತ್ತಿರುವ ನಮೀಬಿಯಾ ತಂಡವು, ಐಸಿಸಿ ಪೂರ್ಣ ಸದಸ್ಯ ರಾಷ್ಟ್ರವೊಂದರ ವಿರುದ್ಧ ದಾಖಲಿಸಿದ ಮೊದಲ ಏಕದಿನ ಸರಣಿ ಜಯ ಇದಾಗಿದೆ.
2027ರ ವಿಶ್ವಕಪ್‌ಗೆ ಜಂಟಿ ಆತಿಥ್ಯ ವಹಿಸಲಿರುವ ನಮೀಬಿಯಾ ತಂಡ ಅಸೋಸಿಯೇಟ್ ಸದಸ್ಯ ರಾಷ್ಟ್ರವಾಗಿರುವುದರಿಂದ, ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯದೆ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿಯಬೇಕಿದೆ.