
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಅನುಮತಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಂವಿಧಾನದ ಒಂಬತ್ತನೇ ಶೆಡ್ಯೂಲ್ ಅಡಿಯಲ್ಲಿ ಶಾಶ್ವತ ರಕ್ಷಣೆ ಒದಗಿಸಲು ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
2011ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿ ಶೇ.17 ಹಾಗೂ ಪರಿಶಿಷ್ಟ ಪಂಗಡ ಶೇ.7ರಷ್ಟು ಜನಸಂಖ್ಯೆ ಹೊಂದಿದ್ದು, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದರು.